ಉಡುಪಿ – ಉಚ್ಚಿಲ ದಸರಾ 2026 ರ ಶೋಭಾಯಾತ್ರೆ ಸಮಯ ವಾಹನಗಳ ಬದಲಿ ಮಾರ್ಗ*

ಉಡುಪಿ – ಉಚ್ಚಿಲ ದಸರಾ 2026 ರ ಶೋಭಾಯಾತ್ರೆ ಸಮಯ ವಾಹನಗಳ ಬದಲಿ ಮಾರ್ಗ*
0Shares

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ರ ಬೃಹತ್ ಶೋಭಾಯಾತ್ರೆ ಮೆರವಣಿಗೆಯ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಂಚಾರ ಅಡಚಣೆ ನಿಯಂತ್ರಣ ಮಾಡುವ ಉದ್ದೇಶದಿಂದ ದಿನಾಂಕ: 21-10-2026 ರಂದು ಈ ಕೆಳಗಿನಂತೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.

  1. ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಅಪರಾಹ್ನ 3:00 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಳಣ್ಣು-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
  2. ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್‌ಗೆ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಳಣ್ಣು-ಮುಂದೂರು ಮಾರ್ಗವಾಗಿ ಸಂಚರಿಸುವುದು.
  3. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9.00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರೆಸುವುದು.
  4. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9.00 ಗಂಟೆಯ ನಂತರ ಉಡುಪಿಯಿಂದ ಸಂಚರಿಸುವುದು.
  5. ಮಂಗಳೂರು-ಉಡುಪಿ ಮಾರ್ಗವಾಗಿ ಅಪರಾಹ್ನ 3.00 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿದೆ.
    ಸಾರ್ವಜನಿಕರು ಸಹಕರಿಸಿ, ಸುರಕ್ಷಿತವಾಗಿ ಸಂಚರಿಸಿ
0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now