ಉಚ್ಚಿಲ ದಸರಾ–2026: ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ತಪಸ್ಯ ನಾಗಾಪ್ರಸಾದ್‌ಗೆ ಪ್ರಥಮ ಬಹುಮಾನ

ಉಚ್ಚಿಲ ದಸರಾ–2026: ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ತಪಸ್ಯ ನಾಗಾಪ್ರಸಾದ್‌ಗೆ ಪ್ರಥಮ ಬಹುಮಾನ
0Shares

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ‘ಉಡುಪಿ ಉಚ್ಚಿಲ ದಸರಾ–2026’ ಮಹೋತ್ಸವದ ಆರನೇ ದಿನದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ವಿಶೇಷ ಆಕರ್ಷಣೆಯಾಯಿತು.

ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಮುಖ್ಯ ವೇದಿಕೆಯಲ್ಲಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 3ರಿಂದ 9 ವರ್ಷ ವಯೋಮಿತಿಯ 76 ಮಕ್ಕಳು ಶಾರದಾ ಮಾತೆಯ ವೇಷ ಧರಿಸಿ ತಮ್ಮ ಮುದ್ದಾದ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಮಕ್ಕಳ ಆಕರ್ಷಕ ವೇಷಭೂಷಣ ಹಾಗೂ ಮನಮೋಹಕ ಪ್ರದರ್ಶನ ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾಯಿತು.

ಸ್ಪರ್ಧೆಯಲ್ಲಿ ಮಲ್ಪೆಯ ತಪಸ್ಯ ನಾಗಾಪ್ರಸಾದ್ ಪ್ರಥಮ ಸ್ಥಾನ ಪಡೆದು ₹8,000 ನಗದು ಬಹುಮಾನ ಗೆದ್ದುಕೊಂಡರು. ಕಿದಿಯೂರಿನ ಸಾನಿಕ ದ್ವಿತೀಯ ಸ್ಥಾನ ಪಡೆದು ₹6,000 ಹಾಗೂ ಸುರತ್ಕಲ್‌ನ ಪ್ರಶ್ವಿ ಎಸ್. ಪುತ್ರನ್ ತೃತೀಯ ಸ್ಥಾನ ಪಡೆದು ₹4,000 ನಗದು ಬಹುಮಾನ ತಮ್ಮದಾಗಿಸಿಕೊಂಡರು.

ಗಣ್ಯರ ಉಪಸ್ಥಿತಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡ ಉಳಿದ ಎಲ್ಲ ಮಕ್ಕಳಿಗೂ ತಲಾ ₹1,000 ನಗದು ನೀಡಿ ಪ್ರೋತ್ಸಾಹಿಸಲಾಯಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now