ಪ್ರಸಾದನ ಕಾರ್ಯಗಾರ: ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಉಡುಪಿ

ಪ್ರಸಾದನ ಕಾರ್ಯಗಾರ: ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಉಡುಪಿ

0Shares

ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಪ್ರಸಾದನ ಕಾರ್ಯಗಾರ ನೇಜಾರಿನಲ್ಲಿ ಜರುಗಿತು. ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಸಂದೀಪ್ ಶೆಟ್ಟಿ ದೀಪ ಪ್ರಜ್ವಲನೆಯ ಮುಖೇನ ಉದ್ಘಾಟಿಸಿ ನೃತ್ಯ ಕಲಾವಿದರಿಗೆ ಪ್ರಸಾದನವೆನ್ನುವುದು ಕಲಾವಿದನ ಕಲಾ ಪ್ರದರ್ಶನಕ್ಕೆ ಪೂರಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಸಾದನ ಕಾರ್ಯಗಾರವನ್ನು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಆರ್ ಕೆ ಕಲಾ ತಂಡಗಳ ನಿರ್ದೇಶಕರು, ಬಹುಮುಖ ಪ್ರತಿಭೆಯ ಸಂಪನ್ಮೂಲ ವ್ಯಕ್ತಿ ಶ್ರೀ ರಾಜೇಶ್ ವಿಟ್ಲ ಅವರು ಭರತ ನಾಟ್ಯ ಮುಖವರ್ಣಿಕೆ, ಕೇಶ ವಿನ್ಯಾಸ, ವಸ್ತ್ರ ವಿನ್ಯಾಸ ದ ಬಗ್ಗೆ ವಿವರಣೆ ಹಾಗು ಪ್ರಾತ್ಯಕ್ಷಿಕೆ ಯೊಂದಿಗೆ ಬಹಳ ಉತ್ತಮ ರೀತಿಯಲ್ಲಿ ಶಿಬಿರಾರ್ಥಿಗಳಿಗೆ ಮನದಟ್ಟಾಗುವ ರೀತಿಯಲ್ಲಿ ನಡೆಸಿಕೊಟ್ಟರು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕರಾದ ಶ್ರೀ ಯೋಗೀಶ್ ಕೊಳಲಗಿರಿ, ನಾಟ್ಯಾಲಯದ ನೃತ್ಯ ಗುರುಗಳು ನಿರ್ದೇಶಕರು ಆಗಿರುವ ಶ್ರೀ ವಿದ್ವಾನ್ ಭವಾನಿಶಂಕರ್ ಉಪಸ್ಥಿತರಿದ್ದರು.
ಸುಮಾರು 80 ಶಿಬಿರಾರ್ಥಿಗಳು ಭಾಗವಹಿಸಿದ್ದ ಕಾರ್ಯಾಗಾರದಲ್ಲಿ ಪೋಷಕರು ಕೂಡ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿ ಶ್ರೀ ರಾಜೇಶ್ ವಿಟ್ಲರವರಿಗೆ ಸಮ್ಮಾನದೊಂದಿಗೆ ಗೌರವಿಸಲಾಯಿತು.
ಶ್ರೀ ಭ್ರಾಮರಿ ನಾಟ್ಯಾಲಯದ ಗುರುಗಳಾದ ಶ್ರೀ ವಿದ್ವಾನ್ ಭವಾನಿಶಂಕರ್ ಅವರು ಸರ್ವರನ್ನು ಸ್ವಾಗತಿಸಿ , ಶ್ರೀ ಸುಬ್ರಹ್ಮಣ್ಯ ಆಚಾರ್ಯ ಅವರು ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now