ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

0Shares

ಉಡುಪಿ, : ಪೂರ್ಣ ಪ್ರಜ್ಞಾ ಕಾಲೇಜು, ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ “ಆರೋಗ್ಯಕರ ಪ್ರಾರಂಭಗಳು, ಭರವಸೆಯ ಭವಿಷ್ಯ” ಎಂಬ ವಿಷಯದ ಮೇಲೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೂರ್ಣ ಪ್ರಜ್ಞಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ರೇಂಜರ್ ಹಾಗೂ ರೋವರ್‌ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಪ್ರಮುಖ ವಕ್ತಾರರಾಗಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮಣಿಪಾಲದ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಂಜಯ್ ಕಿಣಿ ಅವರು ಭಾರತದಲ್ಲಿ ತಾಯಂದಿರು ಮತ್ತು ಮಕ್ಕಳ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಜೊತೆಗೆ, ಆರೋಗ್ಯಕರ ಜೀವನಶೈಲಿಯನ್ನು ಮುಂದುವರಿಸಲು ಪಾಲಿಸಬೇಕಾದ ಉಪಾಯಗಳ ಕುರಿತು ಪ್ರಮುಖ ಸಲಹೆಗಳನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿನ ಪದವಿ ವಿದ್ಯಾರ್ಥಿಗಳು ಮತ್ತು ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಸುಮಾರು 10

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now