
ಉದ್ಯಾವರ : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್’ದ ಬೀರೆರ್ ‘ಕೋಟಿ ಚೆನ್ನಯೆರ್’ ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು.
ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸಾರುವ ಉದ್ಯಾನವನದ ನೀಲ ನಕ್ಷೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅನಾವರಣಗೊಳಿಸಿದರು. ಉದ್ಯಾನವನಕ್ಕಾಗಿ ಕಡೆಕಾರಿನಲ್ಲಿ ಸರಕಾರಿ ಭೂಮಿ ಮಂಜೂರಾತಿಗೆ ಸರಕಾರಕ್ಕೆ ಮಾಜಿ ಸಚಿವರ ಮೂಲಕ ಸಂಘಟನೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಕಳೆದ ಹಲವಾರು ವರ್ಷಗಳಿಂದ ಈ ಸಂಘಟನೆ ಮಾಡುವ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಶ್ರೀ ನಾರಾಯಣ ಗುರು ಯುವ ವೇದಿಕೆಯ ಗೌರವಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಶ್ರೇಯಸ್ ಕೋಟ್ಯಾನ್, ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಮಿಥುನ್ ಅಮೀನ್, ಭೂ ನ್ಯಾಯ ಮಂಡಳಿ ಸದಸ್ಯ ರೊಯ್ಸ್ ಫೆರ್ನಾಂಡಿಸ್, ಪ್ರಮುಖರಾದ ದಿವಾಕರ್ ಬೊಳ್ಜೆ, ಶಬರೀಶ್ ಸುವರ್ಣ, ಸಚಿನ್ ಸಾಲ್ಯಾನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ದಿವಾಕರ್ ಕಡೆಕಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.




Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























