ಸೆ6: ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಸೆ6: ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

0Shares

ಉಡುಪಿ: ಕಥೊಲಿಕ ಎಜುಕೇಶನಲ್ ಸೊಸೈಟಿ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಸಪ್ಟೆಂಬರ್ 6 ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಸಂತೆಕಟ್ಟೆ ಸಮೀಪದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದ ಅಮೂಲ್ಯ ಸಭಾಂಗಣದಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಕ್ಯಾಥೊಲಿಕ್ ಎಜುಕೇಶನಲ್ ಸೊಸೈಟಿ ಆಫ್ ಉಡುಪಿ ಡಯಾಸಿಸ್ ಇದರ ಅಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಲೋಕೆಶ್ ಸಿ ಗೌರವಾನ್ವಿತ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ರಾಜ್ಯ ಶಾಸ್ತ್ರ ಪ್ರಾಧ್ಯಾಪಕರಾದ ಡಾ|ದಯಾನಂದ ನಾಯ್ಕ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ಸಾಧನೆ ತೋರಿದ ಉಡುಪಿಯ ಶ್ರೇಯಾಂಸ್ ಗೋಮ್ಸ್, ಪ್ರಶಸ್ಸಿ ವಿಜೇತ ಶಿಕ್ಷಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಅತ್ಯಧಿಕ ಫಲಿತಾಂಶ ಗಳಿಸಿದ ಶಿಕ್ಷಣಸಂಸ್ಥೆಗಳನ್ನು ಅಭಿನಂದಿಸಲಾಗುವುದು ಎಂದು ಕಥೊಲಿಕ ಎಜುಕೇಶನಲ್ ಸೊಸೈಟಿ ಕಾರ್ಯದರ್ಶೀ ವಂ|ವಿನ್ಸೆಂಟ್ ಕ್ರಾಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now