ಯುವವಾಹಿನಿ (ರಿ ) ಉಡುಪಿ ಘಟಕ
ಯುವವಾಹಿನಿ (ರಿ ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20/10./2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು.
ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ದಾಸ್ ಉಡುಪರವರು ವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಎಲ್ಲರನ್ನೂ ಸ್ವಾಗತಿಸಿದರು. ಸ್ಥಳೀಯ ಸಂಸ್ಥೆ ಕಲಾ ಕಿರಣ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಅರುಣ್ ಶೆಟ್ಟಿಯವರು ವಂದಿಸಿದರು. ಕರ್ನಾಟಕ ಜಾನಪದ ಪರಿಷತ್, ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿಗಳಾದ ಶ್ರೀ ರವಿರಾಜ್ ನಾಯಕ್ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಣೆ ಮಾಡಿದರು.
ಸಮುದಾಯ ಆರೋಗ್ಯ ವಿಭಾಗ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಉಡುಪಿ ಜಿಲ್ಲಾಸ್ಪತ್ರೆ, ಉಡುಪಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಜೊತೆಗೆ ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ ಇನ್ನಿತರ ಸಂಸ್ಥೆಗಳು ಮಹಿಷಮರ್ದಿನಿ ಕ್ರಿಕೆಟರ್ಸ್ ಬೈಲೂರು, ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ. ಈ ಮೇಲಿನ ಎಲ್ಲಾ ಸಂಸ್ಥೆಗಳ ಅಧ್ಯಕ್ಷರುಗಳು, ಜಿಲ್ಲಾ ಸರ್ಜನ್ ಶ್ರೀ ಅಶೋಕ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ನಿಶಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಥಳೀಯರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಬೈಲೂರು ಇವರ ಮುತುವರ್ಜಿಯಲ್ಲಿ ಸಂಪೂರ್ಣ ಶಿಬಿರದ ಕಾರ್ಯ ಚಟುವಟಿಕೆಗಳು ನಡೆದವು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now