ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಿಟ್ಟು ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಿ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಿಟ್ಟು ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಿ

0Shares

ಉಡುಪಿ, ಅಕ್ಟೋಬರ್ 8(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿರುತ್ತದೆ.

ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, ಕಾರ್ಕಳ-ಹೆಬ್ರಿ 08258-298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು. ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್ ಟಾಪ್ ನಲ್ಲಿ https://kscbcseldeclaration.karnataka.gov.in ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now