ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆಗೆ ಸೂಚನೆ

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆಗೆ ಸೂಚನೆ

0Shares

ಉಡುಪಿ ಅಕ್ಟೋಬರ್ 18 : ದೀಪಾವಳಿ ಹಬ್ಬದಂದು ಪಟಾಕಿಯನ್ನು ಸಿಡಿಸುವುದು ಸರ್ವೆ ಸಾಮಾನ್ಯವಾದರೂ ಪಟಾಕಿ ಸಿಡಿಸುವುದರಿಂದ ಆಗುವ ವಾಯುಮಾಲಿನ್ಯ, ಶಬ್ದಮಾಲಿನ್ಯ, ಜಲಮಾಲಿನ್ಯ ಮತ್ತು ಪರಿಸರ ಮಾಲಿನ್ಯವಾಗಿ ಉತ್ತಮ ವಾತವರಣವಿರದೇ ಸುಮಾರು ಮೂರರಿಂದ ನಾಲ್ಕು ದಿನಗಳವರೆಗೆ ಹೊಗೆಯಿಂದ ಕೂಡಿದ ವಾತವರಣವಿರುತ್ತದೆ. ಇದು ಚಿಕ್ಕ ಮಕ್ಕಳ, ವಯಸ್ಸಾದವರ ಹಾಗೂ ಪ್ರಾಣಿ ಪಕ್ಷಿಗಳ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ CSIR – NEERI ಇವರು ಶಿಫಾರಸ್ಸು ಮಾಡಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸೂಚಿಸಲಾಗಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research ) & NEERI (National Environmental Engineering Research Institute) ಚಿಹ್ನೆ ಮತ್ತು ಕ್ಯೂಆರ್‌ ಕೋಡ್ ಗಳನ್ನು ಮುದ್ರಿಸಲಾಗಿರುತ್ತದೆ. ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಬಳಸಲು/ಉಪಯೋಗಿಸಲು ಅವಕಾಶ ಇರುತ್ತದೆ. ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಆದ್ದರಿಂದ ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಿ, ಸರ್ವೋಚ್ಛ ನ್ಯಾಯಾಲಯವು ನಿಗದಿ ಪಡಿಸಿರುವ ಸಮಯದಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಸಿಡಿಸುವಂತೆ ಕ. ರಾ. ಮಾ. ನಿ. ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now