
ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರ (IKS) ದಿಂದ ಇದೇ ಬರುವ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭಗೊಳ್ಳಲಿರುವ ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದರು ಉದ್ಘಾಟಿಸಿದರು. ಒಂದು ವರ್ಷ ಅವಧಿಯ ಒಟ್ಟು ಐದು ಪತ್ರಿಕೆಗಳನ್ನು ಒಳಗೊಂಡ ಈ ಡಿಪ್ಲೊಮಾ ಕೋರ್ಸ್ ನ ಪಾಠದ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗಳೂ ಆನ್ಲೈನ್ ಮೂಲಕ ನಡೆಯಲಿದೆ. ಶ್ರೀ ಪುತ್ತಿಗೆ ಮಠದ ಮಾರ್ಗದರ್ಶನದಲ್ಲಿ ನಡೆಯುವ ಈ ಕೋರ್ಸ್ ನ ಪಠ್ಯಪುಸ್ತಕವಾಗಿ ಶ್ರೀ ಪುತ್ತಿಗೆ ಮಠದ ವತಿಯಿಂದ ಬಿಡುಗಡೆಗೊಂಡ ಗೀತಾಮೃತಸಾರ ಪುಸ್ತಕವನ್ನು ಸ್ವೀಕರಿಸಲಾಗಿದೆ. ಈ ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಅತ್ಯಂತ ಯಶಸ್ವಿಯಾಗಲಿ ಎಂದು ಪೂಜ್ಯ ಶ್ರೀಪಾದರು ಹಾರೈಸಿದರು.
ಕಿರಿಯ ಶ್ರೀಪಾದರಾದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ ಎಸ್ ಮೂಡಿತ್ತಾಯರು ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ಭಾರತೀಯ ಶಿಕ್ಷಣ ವ್ಯವಸ್ಥೆ ಮತ್ತು ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಗಳ ಆವಶ್ಯಕತೆ ಹಾಗೂ ಹಿನ್ನೆಲೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಖ್ಯಾತ ಪುರಾತತ್ವ ಶಾಸ್ತ್ರಜ್ಞರಾದ ಪದ್ಮಶ್ರೀ ಕೆ ಕೆ ಮೊಹಮ್ಮದ್ ಹಾಗೂ ಟೆಂಪ್ಲೆಕ್ಸ್ ಸಿಟಿ ಖ್ಯಾತ ಬರಹಗಾರ
ಶ್ರೀ ಸುರೇಂದ್ರನಾಥ್ ಬೋಪ್ಪರಾಜು ಮತ್ತು ಹಿರಿಯ ಸಂಶೋಧಕ ವಿದ್ವಾಂಸರಾದ ಪ್ರೊ ಶ್ರೀಪತಿ ತಂತ್ರಿ ಉಡುಪಿ ಉಪಸ್ಥಿತರಿದ್ದರು. ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ಸಂಚಾಲಕರಾದ ಶ್ರೀ ಪ್ರಸನ್ನ ಆಚಾರ್ಯರ ಸಂಗಟನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಡಾ. ಬಿ. ಗೋಪಾಲಾಚಾರ್ಯರು ನಿರ್ವಹಿಸಿದರು.
ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕಾಗಿ ನಿಟ್ಟೆ ವಿಶ್ವವಿದ್ಯಾಲಯದ IKS ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಕೆ ( 99459 12075)
ಅವರನ್ನು ಸಂಪರ್ಕಿಸಬಹುದು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now