
ಉಡುಪಿ: ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಉಡುಪಿ ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ನೇಮಕ
ಉಡುಪಿ: ಪೋಪ್ ಲಿಯೋ XIV ಅವರು ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಉಡುಪಿ ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತೆ ಚರ್ಚಿನ ಧರ್ಮಗುರುಗಳಾಗಿ (Parish Priest) ಸೇವೆ ಸಲ್ಲಿಸುತ್ತಿದ್ದಾರೆ.
ಈ ನೇಮಕಾತಿಯನ್ನು ರೋಮ್‌ನಲ್ಲಿ ಶನಿವಾರ, 31 ಜನವರಿ 2026 ರಂದು ಮಧ್ಯಾಹ್ನ 12:00 ಗಂಟೆಗೆ (ಭಾರತೀಯ ಕಾಲಮಾನ ಸಂಜೆ 04:30 ಕ್ಕೆ) ಘೋಷಿಸಲಾಯಿತು. ಅದೇ ಸಮಯದಲ್ಲಿ ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿಯೂ ಅಧಿಕೃತವಾಗಿ ಪ್ರಕಟಿಸಲಾಯಿತು.


Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now