
ಉಡುಪಿ ನಗರಸಭೆಯ ನಿಟ್ಟೂರು ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕದ ಪರಿಸರದಲ್ಲಿ ಸ್ಥಳೀಯ ಜನರಿಗೆ ದುರ್ವಾಸನೆ ಹಾಗೂ ಕುಡಿಯುವ ನೀರಿನ ಬಾವಿಗಳಿಗೆ ಕಲುಷಿತ ನೀರು ಸೇರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹಸಿರು ಪೀಠದ ಆದೇಶದ ಮೇರೆಗೆ ಮಂಜೂರಾದ 30 ಕೋಟಿ ಅನುದಾನದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕದ ಉನ್ನತೀಕರಣ ಕಾಮಗಾರಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಕಾಮಗಾರಿ ಪೂರ್ಣ ಗೊಳಿಸುವಂತೆ ತಿಳಿಸಿದರು.
ವೇಗವಾಗಿ ಬೆಳೆಯುತ್ತಿರುವ ಉಡುಪಿ ನಗರದ ಒಳಚರಂಡಿ ಕೊಳಚೆ ನೀರು ಶುದ್ಧೀಕರಣ ಘಟಕದ ಸಾಮರ್ಥ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ತಕ್ಷಣ ಯೋಜನೆಯನ್ನು ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂದರ್ಭದಲ್ಲಿ ಉಡುಪಿ ನಗರಸಭೆ ಪೌರಾಯುಕ್ತರಾದ ಶ್ರೀ ಮಹಾಂತೇಶ್ ಹಂಗರಗಿ, ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಬೈಲೂರು, ಮಾಜಿ ಸದಸ್ಯರಾದ ಶ್ರೀ ಸಂತೋಷ್ ಜತ್ತನ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಗಿರೀಶ್ ಅಂಚನ್, ಶ್ರೀ ಹರೀಶ್ ಶೆಟ್ಟಿ, ಶ್ರೀ ಸುಂದರ ಕಲ್ಮಾಡಿ, ಶ್ರೀ ಮಂಜುನಾಥ ಮಣಿಪಾಲ, ಶ್ರೀ ಅಶೋಕ್ ನಾಯ್ಕ್, ಶ್ರೀ ಗಿರಿಧರ ಆಚಾರ್ಯ ಕರಂಬಳ್ಳಿ, ಶ್ರೀ ಟಿ. ಜಿ. ಹೆಗ್ಡೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಶ್ರೀ ದಿನೇಶ್ ಅಮೀನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀ ದುರ್ಗಾಪ್ರಸಾದ್ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now