ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ*

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ*

0Shares

ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಸಂದೇಶ, ಸುಶಾಂತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಜಬ್ಬಾರ್ ಹುಸೇನ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 12.03.2026ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಈ ಪೈಕಿ ಜಬ್ಬಾರ್ ಹುಸೈನ್, ತಂದೆ: ದಿ. ಮಯ್ಯದ್ದಿ ಬ್ಯಾರಿ, ವಾಸ: ನಡ್ಸಾಲು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬುವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದ್ದು, ಈತನ ವಿರುದ್ಧ ಉಡುಪಿ. ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರ ನಗರದಲ್ಲಿ ಇದುವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿರುತ್ತದೆ.

ಹಿರಿಯಡ್ಕ ಠಾಣಾ ವ್ಯಾಪ್ತಿಯ ಸಂದೇಶ, ತಂದೆ: ಸದಾಶಿವ ನಾಯ್ಕ್, ವಾಸ: ದೇವಿ ನಿಲಯ, ಪುತ್ತಿಗೆ, ಮುಖ್ಯ ರಸ್ತೆ, ಬೊಮ್ಮರಬೆಟ್ಟು ಗ್ರಾಮ, ಉಡುಪಿ ತಾಲೂಕು ಮತ್ತು ಜಿಲ್ಲೆ ಎಂಬುವರ ವಿರುದ್ಧ ಐದು ಪ್ರಕರಣ ದಾಖಲಾಗಿದ್ದು, ರೌಡಿ ಹಾಳೆ ತೆರೆಯಲಾಗಿರುತ್ತದೆ.

ಅಂತೆಯೇ ಹಿರಿಯಡ್ಕ ಠಾಣಾ ವ್ಯಾಪ್ತಿಯ ಸುಶಾಂತ್, ತಂದೆ: ಸದಾನಂದ ಪೂಜಾರಿ, ವಾಸ: ಸೀತಾ ನಿಲಯ, ಪಾಪುಜೆ ದರ್ಖಾಸು, ಹಿರಿಯಡಕ, ಉಡುಪಿ ತಾಲೂಕು ಮತ್ತು ಜಿಲ್ಲೆ ವಿರುದ್ಧ ಮೂರು ಪ್ರಕರಣ ದಾಖಲಾಗಿರುತ್ತದೆ.

ಜಬ್ಬಾರ್ ಹುಸೇನ್ ಎಂಬುವರನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ , ಸಂದೇಶ್ ಎಂಬುವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಶಾಂತ್ ಎಂಬಾತನನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now