
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಆಯೋಗವು ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿದೆ.
ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಬೆಂಬಲಿಸಿದೆ ಕರ್ನಾಟಕ ವಿಧಾನಸಭೆಯ ಈ ತೀರ್ಮಾನಕ್ಕೆ ಒಕ್ಕೂಟ ಸರಕಾರ ಒಪ್ಪಿಗೆಯನ್ನು ನೀಡಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರ್ಪಡೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಂಡು ಸಂಸದರಿಗೆ ಮನವಿ ನೀಡುವ ಭಾಗವಾಗಿ ಇಂದು ಉಡುಪಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅವರ ಆಪ್ತ ಸಹಾಯಕರ ಮೂಲಕ 11 ಬೇಡಿಕೆಗಳ ಮನವಿ ನೀಡಲಾಯಿತು.
ಈ ವೇಳೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್ ನರಸಿಂಹ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು ಇದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now