ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
0Shares

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆ ವರೆಗಿನ ಸುಮಾರು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು

ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ವೇಗ ನೀಡುವ ನಿಟ್ಟಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಇಂದು ಲೋಕಾರ್ಪಣೆ ಮಾಡಲಾಗಿದ್ದು, ಈಗಾಗಲೇ ಬ್ರಹ್ಮಾವರ ಹೆಬ್ರಿ ಮುಖ್ಯ ರಸ್ತೆಯ ಸುಮಾರು 80 ಶೇಕಡ ರಸ್ತೆ

ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಕರ್ಜೆಯಿಂದ ಕುರ್ಪಾಡಿ ವರೆಗಿನ ರಸ್ತೆಯನ್ನು ಅತೀ ಶೀಘ್ರದಲ್ಲಿ ಅಭಿವೃದ್ಧಿ ಪಡಿಸಲು ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

ಸುಮಾರು 5 ಕೋಟಿ ಅನುದಾನ ಒದಗಿಸಿ ರಸ್ತೆಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ರವರಿಗೆ ಗ್ರಾಮಸ್ಥರ ಪರವಾಗಿ ಶ್ರೀ ನಾಗರಾಜ ಸೂಡಾ ಹಾಗೂ ಶ್ರೀ ಸತೀಶ್ ಪೈ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪ್ರತಾಪ್ ಹೆಗ್ಡೆ ಮಾರಾಳಿ, ಪಕ್ಷದ ಪ್ರಮುಖರಾದ ಶ್ರೀ ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀ ಕಮಲಾಕ್ಷ ಹೆಬ್ಬಾರ್, ಶ್ರೀ ಹರೀಶ್ ಶೆಟ್ಟಿ ಚೇರ್ಕಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಮನೋಜ್ ಶೆಟ್ಟಿ, ಗುತ್ತಿಗೆದಾರರಾದ ತಡಾಲ್ ಸುರೇಶ್ ಶೆಟ್ಟಿ, ಕೆಂಜೂರು ಕಳ್ತೂರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now