
ಉಡುಪಿ, ಜೂನ್ 5: ಫೆಡರಲ್ ಬ್ಯಾಂಕ್ ಉಡುಪಿ ಶಾಖೆಯ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿಯ ಸೇಂಟ್ ಮೇರೀಸ್ ಹೈಯರ್ ಪ್ರೈಮರಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಫಾ. ಲಿಯೋ ಪ್ರವೀಣ್ ಡಿ’ಸೋಜಾ, ಉಡುಪಿ ಧರ್ಮಪ್ರಾಂತ್ಯದ ಬಿಇಸಿ ಹಾಗೂ ಏಕ್ಯತಾ ಆಯೋಗದ ನಿರ್ದೇಶಕರು ಮತ್ತು ಮದರ್ ಆಫ್ ಸೊರೋಸ್ ಚರ್ಚ್‌ನ ಸಹಾಯಕ ಧರ್ಮಗುರು, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ನೆಟ್ಟು ಬೆಳೆಸುವಂತೆ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮರಿಯಾ ಕ್ರಾಸ್ತಾ ಅಧ್ಯಕ್ಷತೆ ವಹಿಸಿ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಫೆಡರಲ್ ಬ್ಯಾಂಕ್‌ನ ಸಿಬ್ಬಂದಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಕಾರ್ಯಕ್ರಮವು ಪರಿಸರ ಜಾಗೃತಿ ಮೂಡಿಸುವುದರ ಜೊತೆಗೆ ಹಸಿರು ಪರಿಸರ ನಿರ್ಮಾಣದ ಸಂಕಲ್ಪಕ್ಕೆ ಮತ್ತಷ್ಟು ಬಲ ತುಂಬಿತು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now