ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ರಾಜೀವನಗರ ವಾಸಿ ಜಗದೀಶ ಪೂಜಾರಿ ಬಂಧನ

ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ರಾಜೀವನಗರ ವಾಸಿ ಜಗದೀಶ ಪೂಜಾರಿ ಬಂಧನ
0Shares

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಗದೀಶ ಪೂಜಾರಿ ಪ್ರಾಯ: 33 ವರ್ಷ ತಂದೆ: ದಿ.ಶಿವಪ್ಪ ಪೂಜಾರಿ ವಾಸ: ಗಣಪತಿ ಶೆಣೈರವರ ಬಾಡಿಗೆ ಮನೆ, ರಾಜೀವನಗರ ಎರಡನೇ ಕ್ರಾಸ್‌, 80 ಬಡಗಬೆಟ್ಟು ಗ್ರಾಮ ಉಡುಪಿ ತಾಲೂಕು‌ ಮತ್ತು ಜಿಲ್ಲೆ ಎಂಬಾತನನ್ನು ದಿನಾಂಕ 12/06/2026 ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್.‌ ಕಾಯ್ದೆಯಡಿ ಬಂಧಿಸಲಾಯಿತು. ಈತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲು ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆರವರ ವರದಿಯ ಮೇರೆಗೆ ಮಾನ್ಯ ಪೊಲೀಸ್‌ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರುರವರು ಬಂಧನ ಆದೇಶ ಹೊರಡಿಸಿರುತ್ತಾರೆ.

ಬಂಧಿತ ಆಸಾಮಿಯ ವಿರುದ್ದ ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಸೆನ್‌ ಅಪರಾಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 03 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 02 ಪ್ರಕರಣ ದಾಖಲಾಗಿರುತ್ತದೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳಲ್ಲಿ 01 ಪ್ರಕರಣವು ಮಾನ್ಯ ನ್ಯಾಯಾಲಯದ ವಿಚಾರಣೆಯಲ್ಲಿದ್ದು ಉಳಿದ 2 ಪ್ರಕರಣಗಳು ತನಿಖೆಯಲ್ಲಿರುತ್ತದೆ. ದಾಖಲಾದ 02 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿರುತ್ತದೆ.

ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now