ತುಳುನಾಡ ರಕ್ಷಣಾ ವೇದಿಕೆ ಹಲವಾರು ಗಣ್ಯರು ಸೇರ್ಪಡೆ

ತುಳುನಾಡ ರಕ್ಷಣಾ ವೇದಿಕೆ ಹಲವಾರು ಗಣ್ಯರು ಸೇರ್ಪಡೆ
0Shares

ಉಡುಪಿ, ಜೂನ್ 14: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಅಧಿಕಾರ ಹಸ್ತಾಂತರ ಹಾಗೂ ಸಂಘಟನಾ ಬಲವರ್ಧನೆ ಕುರಿತ ವಿಶೇಷ ಸಭೆಯು ದಿನಾಂಕ 14-06-2026 ರಂದು ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್ಸ್‌ನಲ್ಲಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು, ತುಳುನಾಡಿನ ಅಸ್ಮಿತೆ, ಭಾಷೆ, ಸಂಸ್ಕೃತಿ ಹಾಗೂ ಹಕ್ಕುಗಳ ರಕ್ಷಣೆಗೆ ಸಂಘಟನೆಯ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುತ್ತಿದ್ದು, ಸಂಘಟನೆಯನ್ನು ಮತ್ತಷ್ಟು ಜನಪರ ಹಾಗೂ ಬಲಿಷ್ಠವಾಗಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದು ಹೇಳಿದರು. ಯುವಜನರನ್ನು ಸಂಘಟನೆಯತ್ತ ಆಕರ್ಷಿಸಿ ತುಳುನಾಡಿನ ವಿಚಾರಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆ, ಸದಸ್ಯತ್ವ ಅಭಿಯಾನ, ಸಾಮಾಜಿಕ ಚಟುವಟಿಕೆಗಳು, ತುಳುನಾಡಿನ ಹಿತಾಸಕ್ತಿ ವಿಚಾರಗಳು ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಹೋರಾಟಗಳು ಮತ್ತು ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಂಘಟನೆಯ ಬೆಳವಣಿಗೆಗೆ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ಮಹತ್ವದ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಶಂಕರ ಉಡುಪಿ, ಹಾಗೂ ಸಂಘಟನಾ ಸಹ ಕಾರ್ಯದರ್ಶಿಯಾಗಿ ಕೃಷ್ಣ ಉಡುಪಿ ಅವರನ್ನು ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ನೇಮಕಾತಿ ಆದೇಶ ನೀಡಿ ಗೌರವಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now