
ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ, ಕಾರ್ಯದರ್ಶಿಯಾಗಿ ಜೋನ್ ಪ್ರಶಾಂತ್ ಗೋಮ್ಸ್, ಕೋಶಾಧಿಕಾರಿಯಾಗಿ ವಿಲ್ಫ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ.
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದು, ಪದಗ್ರಹಣ ಕಾರ್ಯಕ್ರಮವು ಜೂನ್ 26ರಂದು ನಡೆಯಲಿದೆ.
ನೂತನ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪ್ರಸ್ತುತ ಉಡುಪಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿದ್ದಾರೆ. ಪ್ರಮುಖವಾಗಿ ಐಸಿವೈಎಂ ಉದ್ಯಾವರ ಘಟಕದ ಮಾಜಿ ಅಧ್ಯಕ್ಷರಾಗಿರುವ ಇವರು, ಉದ್ಯವರ ಚರ್ಚಿನ ಆರ್ಥಿಕ ಸಮಿತಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಾವರ ಫ್ರೆಂಡ್ಸ್ ಸರ್ಕಲ್ ನ ಸಕ್ರಿಯ ಸದಸ್ಯರಾಗಿದ್ದಾರೆ. ಜೋನ್ ಗೋಮ್ಸ್ ಯುವ ಉದ್ಯಮಿಯಾಗಿದ್ದು, ಉದ್ಯಾವರ ಚರ್ಚ್ ಪಾಲನ ಮಂಡಳಿಯ ಸದಸ್ಯರಾಗಿದ್ದಾರೆ. ವಿಲ್ಫ್ರೆಡ್ ಡಿಸೋಜಾ ಉದ್ಯಾವರ ಚರ್ಚಿನ ಮಾಜಿ ಉಪಾಧ್ಯಕ್ಷರಾಗಿ, ಪ್ರಸ್ತುತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲದೇ ಸೌಹಾರ್ದ ಸಮಿತಿಯ ಅಧ್ಯಕ್ಷರಾಗಿ ಏಳು ವರ್ಷ ಸೇವೆ ಸಲ್ಲಿಸಿದ್ದಾರೆ.

ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now