
ಉಡುಪಿ : ತಾಲ್ಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡು 7 ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪವಿಭಾಗ ಹಾಗೂ ಮಲ್ಪೆ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ., ಪಿಎಸ್‌ಐ ಗಂಗಪ್ಪ ಎಸ್. ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದರು.
ದಾಳಿಯ ವೇಳೆ ಹೋಂಸ್ಟೇಯ ಕೊಠಡಿಯಲ್ಲಿ ನಾಜೀಲ್, ಮೊಹಮ್ಮದ್ ಅಜರುದ್ದೀನ್, ಮೊಹಮ್ಮದ್ ಅಫ್ಘಾನ್ ಹಾಗೂ ವಿಶ್ಲೇಶ್ ಎಂಬ ನಾಲ್ವರನ್ನು ಪರಿಶೀಲಿಸಿದಾಗ ಅವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಯಿತು. ಬಳಿಕ ಪಂಚರ ಸಮಕ್ಷಮ ನಡೆಸಿದ ಶೋಧನೆಯಲ್ಲಿ 33.81 ಗ್ರಾಂ កាដា (ជា ₹3,000), 9.73 ಎಂಡಿಎಂಎ (ಅಂದಾಜು ಮೌಲ್ಯ ₹20,000), 5 ಮೊಬೈಲ್ ಫೋನ್‌ಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು.
ಪ್ರವಾಸೋದ್ಯಮ ಇಲಾಖೆಯಿಂದ ಹಾಗೂ ಪೊಲೀಸರಿಂದ ಅನಧಿಕೃತವಾಗಿ ಹೋಂ ಸ್ಟೇ ನಡೆಸದಂತೆ ನೋಟಿಸ್ ನೀಡಲಾಗಿದ್ದರೂ ನಿಯಮ ಉಲ್ಲಂಘಿಸಿ ಹೋಂ ಸ್ಟೇ ನಡೆಸುತ್ತಿದ್ದ ಮಾಲೀಕ ಧನ್ವತ್ ರಿಕಿತ್, ಕೆಲಸಗಾರ ಬಸವರಾಜ್ ಮಾದಕ ವಸ್ತುಗಳ ಸೇವನೆಗೆ ಸಹಕಾರ ನೀಡಿರುವ ಆರೋಪದಡಿ ಬಂಧಿಸಲ್ಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಜಿನಾ ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now