
ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಕಥೊಲಿಕ್ ಸಭಾ ಮಂಗಳೂರು, ಹಾಗೂ ಉಡುಪಿ ಪ್ರದೇಶ ವತಿಯಿಂದ ಮಂಗಳವಾರ ಮನವಿ ನೀಡಲಾಯಿತು.
ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 22 ಜಿಲ್ಲೆಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ.
ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿರಾಗುತ್ತಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ಅಥವಾ ವಿಧಾನಪರಿಷತ್ ಸಭಾಪತಿಯಾಗಿ ನೇಮಕ ಮಾಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರಾಗಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನಿಯೋಗದಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಸಂತೋಶ್ ಡಿಸೋಜಾ,ಉಪಾಧ್ಯಕ್ಷರಾದ ಸ್ಟೀವನ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೊ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹ ಶಿರ್ವ, ಮಾಜಿ ಅಧ್ಯಕ್ಷರಾದ ವಾಲ್ಟರ್ ಸಿರಿಲ್ ಪಿಂಟೊ, ವಲೇರಿಯನ್ ಫೆರ್ನಾಂಡಿಸ್ ಹಾಗೂ ಇತರರು ಉಪಸ್ಥಿತರಿದ್ದರು.
ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now