ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ,ಮಹಿಳಾ ಜಿಲ್ಲಾ ಘಟಕ ಹಾಗೂ ಬ್ರಹ್ಮಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ,ಮಹಿಳಾ ಜಿಲ್ಲಾ ಘಟಕ ಹಾಗೂ ಬ್ರಹ್ಮಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ
0Shares

ಉಡುಪಿ, ಜುಲೈ 5: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಆಯ್ಕೆಯಾದ ಮಹಿಳಾ ಜಿಲ್ಲಾ ಘಟಕ ಹಾಗೂ ಬ್ರಹ್ಮಾವರ ತಾಲೂಕು ಘಟಕದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವು ಭಾನುವಾರ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಬ್ರಹ್ಮಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಆಚಾರ್ಯ ಹೇರಂಜೆ, ಉಪಾಧ್ಯಕ್ಷ ನಿತಿನ್ ಶೆಟ್ಟಿ ಪೇತ್ರಿ, ಸಂಘಟನಾ ಕಾರ್ಯದರ್ಶಿ ವಿಜಯ್ ನಾಯಕ್, ಖಜಾಂಚಿ ವಿಘ್ನೇಶ್ ನಾಯಕ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಶರತ್ ರಾಜ್ ಆರೂರು ಅವರು ನೂತನ ತಂಡಕ್ಕೆ ಶುಭ ಹಾರೈಸಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವಂತೆ ಕರೆ ನೀಡಿದರು.

ಬಳಿಕ ಉಡುಪಿ ಜಿಲ್ಲಾ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪವಿತ್ರಾ ಆಚಾರ್ಯ, ಉಪಾಧ್ಯಕ್ಷೆ ಗಾಯತ್ರಿ ಕಾಪು, ಜೊತೆ ಕಾರ್ಯದರ್ಶಿ ವನಿತಾ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ವೀಣಾ ಪ್ರಾಣೇಶ್, ಸಂಘಟನಾ ಕಾರ್ಯದರ್ಶಿ ವಿಮಲಾ ಮೆಂಡನ್, ಸಂಘಟನಾ ಜೊತೆ ಕಾರ್ಯದರ್ಶಿ ಮಮತಾ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಮಂಜುಳಾ ಪೂಜಾರಿ, ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಸಂಘಟನಾ ಜೊತೆ ಕಾರ್ಯದರ್ಶಿ ಕೃಷ್ಣ ಪೂಜಾರಿ ಮಾರ್ಪಳ್ಳಿ ಸೇರಿದಂತೆ ಎಲ್ಲ ನೂತನ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ ಅವರನ್ನು ವಿಶೇಷವಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಶರತ್ ರಾಜ್ ಆರೂರು ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ, ತುಳುನಾಡಿನ ಪರಂಪರೆ, ಸಂಸ್ಕೃತಿ ಹಾಗೂ ಆಚರಣೆ-ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಹಾಗೂ ಯುವಕರನ್ನು ಸಂಘಟನೆಯೊಂದಿಗೆ ಸೇರಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಮಹಿಳಾ ಘಟಕದ ಅಧ್ಯಕ್ಷೆಗೆ ಗೌರವ ಸಲ್ಲಿಸಿ, ಸಂಘಟನೆಯ ಬೆಳವಣಿಗೆಗೆ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷೀಯ ಭಾಷಣದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು, ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳು ಸಂಘಟನೆಯ ಸಿದ್ಧಾಂತ ಹಾಗೂ ಉದ್ದೇಶಗಳಿಗೆ ಬದ್ಧರಾಗಿ ಜನಪರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾದ ಆರು ಪ್ರಮುಖ ಜನಪರ ಮನವಿಗಳ ಕುರಿತು ಮಾಹಿತಿ ನೀಡಿದರು ಹಾಗೂ ಸಂಘಟನೆಯ ಮುಂದಿನ ಕಾರ್ಯಯೋಜನೆಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಜಿಲ್ಲಾ ಉಪಾಧ್ಯಕ್ಷೆ ಗಾಯತ್ರಿ ಕಾಪು, ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಭೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್, ಉಪಾಧ್ಯಕ್ಷ ಗುಣಕರ ಹಾಲಕ್ಕಿ, ಕಾಪು ಘಟಕದ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕುಲಾಲ್, ಮಹಿಳಾ ಪ್ರಧಾನ ಕಾರ್ಯದರ್ಶಿ ಪವಿತ್ರಾ ಆಚಾರ್ಯ, ಮಹಿಳಾ ಜೊತೆ ಕಾರ್ಯದರ್ಶಿ ವನಿತಾ ಆಚಾರ್ಯ, ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯೆ ಶೆಟ್ಟಿ, ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಹಾವಂಜೆ ಅವರು ವಂದನಾರ್ಪಣೆ ಸಲ್ಲಿಸಿ ಕಾರ್ಯಕ್ರಮವನ್ನು ಸಮಾಪಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now