ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ
0Shares

ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ ಪ್ರತಿಷ್ಠಿತ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಹಿರಿಯ ನ್ಯಾಯವಾದಿ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ಆಯ್ಕೆಯಾಗಿದ್ದಾರೆ.

ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜ್, ಹಿಂದೂ ಜೂನಿಯರ್ ಕಾಲೇಜ್, ಹಿಂದೂ ಪ್ರೌಢ ಶಾಲೆ, ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು, ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ ( ಸಿಬಿಎಸ್‌ಸಿ) ಮುಂತಾದ ಅನೇಕ ಶಿಕ್ಷಣ ಸಂಸ್ಥೆಗಳು ಶಿರ್ವಾ ವಿದ್ಯಾವರ್ಧಕ ಸಂಘವು ಹೊಂದಿದೆ.

ಇವರು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ, ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಹುಬ್ಬಳಿಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ಉಡುಪಿ ಎಪಿಎಮ್‌ ಸಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನಿರ್ದೇಶಕರಾಗಿ, ಅನೇಕ ದೇವಸ್ಥಾನ, ದೈವಸ್ಥಾನದ ಜಿರ್ಣೋದ್ದಾರ ಕಾರ್ಯಗಳನ್ನು ಮಾಡಿದ್ದು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ನಿರಂತರ ಕೆಲಸವನ್ನು ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now