ರಂಗಭೂಮಿ ಉಡುಪಿ ವತಿಯಿಂದ ವಂದೇ ಮಾತರಂ 150 ನೇ ಸಂಭ್ರಮಾಚರಣೆ

ರಂಗಭೂಮಿ ಉಡುಪಿ ವತಿಯಿಂದ ವಂದೇ ಮಾತರಂ 150 ನೇ ಸಂಭ್ರಮಾಚರಣೆ
0Shares

ಉಡುಪಿ: ವಂದೇ ಮಾತರಂ ದೇಶದಲ್ಲಿ ನಡೆದು ಬಂದ ಕ್ಷಣಗಳನ್ನು ನೆನಪಿಸಿಕೊಂಡರೆ ರೋಮಾಂಚನವಾಗುತ್ತದೆ. ವಂದೇ ಮಾತರಂ ಗೆ ರಾಷ್ಟ್ರಗೀತೆ ಸಮನಾದ ಪ್ರಾಮುಖ್ಯತೆ ಸಿಕ್ಕಿರುವುದು ಸಂತೋಷ ತರೋ ವಿಚಾರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜು ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಸಹಕಾರದಲ್ಲಿ ವಂದೇ ಮಾತರಂನ 150 ರ ಸಂಭ್ರಮಾಚರಣೆ ಸಂದರ್ಭದಲ್ಲಿ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಮೂಲಕ ಹಮ್ಮಿಕೊಂಡ ಯುವ ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಸಂಪೂರ್ಣ ದೇಶ ವಂದೇ ಮಾತರಂಗೆ ತೆರೆದು ಕೊಂಡಿದೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಬಾರದು ಎಂಬ ಬಗ್ಗೆ ಚರ್ಚೆ ಕೂಡ ನಡೆದಿತ್ತು. ಇದೀಗ ದೇಶಾದ್ಯಂತ ಸುಮಾರು 20 ಲಕ್ಷ ಮಂದಿ ಸೇರುವ 4,000 ಕಲಾವಿದರ ಭಾಗವಹಿಸುವಿಕೆಯಲ್ಲಿ ಈ ಕಾರ್ಯಕ್ರಮ ಏಕಕಾಲದಲ್ಲಿ ನಡೆಯುತ್ತಿದೆ ಎಂದ ಅವರು ಉಡುಪಿಗೆ ಈ ಕಾರ್ಯಕ್ರಮವನ್ನು ತಂದ ರಂಗಭೂಮಿಗೆ ಅಭಿನಂದನೆಯನ್ನು ಸಲ್ಲಿಸಿದರು.

ಮಣಿಪಾಲ ಮಾಹೆಯ ಸಹಕುಲಾದಿಪತಿ, ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸಲು ರಂಗಭೂಮಿ ಉಡುಪಿ ಸಂಸ್ಥೆ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಶ್ರಮಿಸುತ್ತಿರುವುದು ಹೆಮ್ಮೆಯ ವಿಷಯ. ಇದು ಇಂದಿನ ಅಗತ್ಯತೆಯಾಗಿದೆ ಎಂದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now