ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ : ಶಿಕ್ಷಣ ಸಮಾಜಮುಖಿಯಾಗಿರಲಿ ಎಂದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ : ಶಿಕ್ಷಣ ಸಮಾಜಮುಖಿಯಾಗಿರಲಿ ಎಂದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ
0Shares

ತೋನ್ಸೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, “ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದಲ್ಲಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮನೋಭಾವ ಬೆಳೆಸಿಕೊಳ್ಳಬೇಕು. ತಾವು ಪಡೆದ ಶಿಕ್ಷಣದಿಂದ ಸಮಾಜದ ಇತರರಿಗೆ ಸಹಾಯವಾಗುವಂತಾಗಿದ್ದರೆ ಮಾತ್ರ ಶಿಕ್ಷಣಕ್ಕೆ ನಿಜವಾದ ಅರ್ಥ ಸಿಗುತ್ತದೆ” ಎಂದ XA ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಹಾತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜನಾಬ್ ಇದ್ರೀಸ್ ಹೂಡೆ ವಹಿಸಿದ್ದರು. ವೇದಿಕೆಯಲ್ಲಿ ಸಾಲಿಹಾತ್ ಸಲಹಾ ಸಮಿತಿಯ ಅಧ್ಯಕ್ಷ ಡಾ. ಶಹನ್ವಾಜ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಜನಾಬ್ ಎಂ. ಎ. ಮೌಲಾ, ಶಿಕ್ಷಣ ಸಂಸ್ಥೆಯ ಹಿತೈಷಿಗಳಾದ ಟಿ. ಎಸ್. ಅನ್ಸಾ‌ರ್, ಅಶ್ರಫ್ ಕೊಡಿಬೆಂಗ್ರೆ, ಶಾಲಾ ವಿಭಾಗದ ಅಕಾಡೆಮಿ ಮುಖ್ಯಸ್ಥ ಹಾಸಿಬ್ ತರ್ಫದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now