ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಭಜನೆ, ನಾಮಸಂಕೀರ್ತನೆ ಹಾಗೂ ಗಾಯನದಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.

ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಭಜನೆ, ನಾಮಸಂಕೀರ್ತನೆ ಹಾಗೂ ಗಾಯನದಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.
0Shares

ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ನಡೆದ ಗುರುಪೂರ್ಣಿಮೆಯ ಪ್ರಯುಕ್ತದ ‘ಸಹಸ್ರ ಕಂಠ ಗಾಯನ ಕಾರ್ಯಕ್ರಮ’ ಭಕ್ತಿಭಾವದಿಂದ ನೆರವೇರಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಬುಧವಾರ ಬೆಳಿಗ್ಗೆ ರಾಜಾಂಗಣದಲ್ಲಿ ಸಹಸ್ರ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕುಣಿತ ಭಜನೆ ನಡೆಯಿತು. ಬಳಿಕ ಮಧ್ಯಾಹ್ನ 2 ಗಂಟೆಯಿಂದ ಉಡುಪಿ ಹಾಗೂ ದಾಸನಮನ ತಂಡಗಳ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು.

ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಭಜನೆ, ನಾಮಸಂಕೀರ್ತನೆ ಹಾಗೂ ಗಾಯನದಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now