ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮ: ವಿವಿಧ ಸ್ಪರ್ಧೆಗಳಿಗೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಚಾಲನೆ..!

ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮ: ವಿವಿಧ ಸ್ಪರ್ಧೆಗಳಿಗೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಚಾಲನೆ..!
0Shares

ಉಡುಪಿ, ಆಗಸ್ಟ್ 1: ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಜಗದೊಡೆಯನ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಿಗೆ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಚಾಲನೆ ನೀಡಿದರು.

ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಸ್ಪರ್ಧೆಗಳ ಅಂಗವಾಗಿ ಮೊದಲ ದಿನ ‘ದಾಸರ ಪದಗಳು’ ಸಂಗೀತ ಸ್ಪರ್ಧೆ ವಿವಿಧ ವಿಭಾಗಗಳಲ್ಲಿ ನಡೆಯಿತು.

ಜನ್ಮಾಷ್ಟಮಿ ಅಂಗವಾಗಿ ಮುಂದಿನ ದಿನಗಳಲ್ಲಿಯೂ ವಿವಿಧ ಸಾಂಸ್ಕೃತಿಕ ಹಾಗೂ ಭಕ್ತಿಪರ ಸ್ಪರ್ಧೆಗಳು ನಡೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ವತಿಯಿಂದ ಆಹ್ವಾನಿಸಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now