ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಶೂಟೌಟ್ ಆರೋಪಿಯ ಬಂಧನ

ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಶೂಟೌಟ್ ಆರೋಪಿಯ ಬಂಧನ
0Shares

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಕಾಲಿಗೆ ಗುಂಡೇಟು | ಕಾಪು – ಕಾರ್ಕಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ

ಉಡುಪಿ: ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ (ಆ.08) ಸಂಜೆ ಹಾಡಹಗಲೇ ಉದ್ಯಮಿಯೋರ್ವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಮಾಡಲಾಗಿತ್ತು. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ ಘಟನೆಯೂ ನಡೆದಿದೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ಪರಾರಿಯಾಗಲು ಯತ್ನಿಸಿದ್ದಾರೆ, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now