
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಷ್ಟೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಎಚ್ಚೆತ್ತ ನಿರ್ವಾಹಕರು ಬಸ್ಸನ್ನು ನಿಲ್ಲಿಸಿ, ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಬಸ್ಸಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now