
ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಡಾ. ಮಹೇಂದ್ರ ಕುಮಾರ್ ಶೆಟ್ಟಿ, ಆಗಸ್ಟ್ 21ರಂದು ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರು ಹೋಟೆಲ್‌ನಲ್ಲಿ ಇದ್ದ ಸಂದರ್ಭದಲ್ಲಿ ಏಕಾಏಕಿ ಹಲ್ಲೆ ನಡೆಸಿರುವ ದೃಶ್ಯಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದವು.
ಈ ಬಗ್ಗೆ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಸಹಿತ ಸಾಮಾಜಿಕ ಮತ್ತು ರಾಜಕೀಯ ನಾಯಕರು ಖಂಡನೆ ವ್ಯಕ್ತಪಡಿಸಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now