
ಉಡುಪಿ: ಪಿತ್ರೋಡಿಯ ಮೀನುಗಾರಿಕಾ ಮತ್ತು ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರ ಸಂಘಕ್ಕೆ ಇದೇ ಮೊದಲ ಬಾರಿಗೆ ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ನೀಡಲ್ಪಡುವ ‘ಸಾಧನಾ ಪ್ರಶಸ್ತಿ’ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾಂಕ್ನ ಅಧ್ಯಕ್ಷರಾದ ಡಾ | ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಅಧ್ಯಕ್ಷರಾದ ಗಿರೀಶ್ ವಿ ಸುವರ್ಣ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಲೇಖನ ಇವರು ಪ್ರಶಸ್ತಿ ಸ್ವೀಕರಿಸಿದರು. ಉಪಾಧ್ಯಕ್ಷರಾದ ಉಮೇಶ್ ಕರ್ಕೇರ ಮತ್ತು ನಿರ್ದೇಶಕರುಗಳಾದ ಗಂಗಾಧರ್ ಕರ್ಕೇರ, ಪುಷ್ಪರಾಜ್ ಕೋಟ್ಯಾನ್, ವೇಣುಗೋಪಾಲ್ ತಿಂಗಳಾಯ, ಶೇಖರ್ ಸಾಲ್ಯಾನ್, ಐತಪ್ಪ ಕೋಟ್ಯಾನ್, ಮಾಲತಿ ಸಾಲ್ಯಾನ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಲಾವಣ್ಯ ಕೆ.ಆರ್ ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now