
ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 4ನೇ ಬಾರಿಗೆ ಲಭಿಸಿದೆ.
ಸಹಕಾರಿ ಕ್ಷೇತ್ರದಲ್ಲಿ ಸೊಸೈಟಿ ಸಲ್ಲಿಸುತ್ತಿರುವ ಗಮನಾರ್ಹ ಸೇವೆ, ಉತ್ತಮ ಕಾರ್ಯನಿರ್ವಹಣೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಸೊಸೈಟಿಯ ಪರವಾಗಿ ಅಧ್ಯಕ್ಷರಾದ ಲೂವಿಸ್ ಲೋಬೊ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡೀಸ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now