
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ದಿನಾಂಕ 26.08.2026 ಬದಲಾಗಿ ದಿನಾಂಕ 25.08.2026 ರಂದು ರಜೆಯನ್ನು ಘೋಷಿಸಲಾಗಿದೆ
ಉಡುಪಿ, ಆ.೨೪: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.೨೬ರ ಬದಲಿಗೆ ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now