
ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯು ಸೆ.30ರಂದು ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ.ಪ್ರವಾಸಿ ತಾಣಗಳನ್ನು ಅನ್ವೇಷಿಸಿ
ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಳಿಗ್ಗೆ 9 ಗಂಟೆಗೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಷಣ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಎಸ್. ಕೆ. ಸಾಲ್ಯಾನ್ ಬೆಳ್ಳಣ್, ಮಲ್ಪೆ ಸಾಯಿಶ್ಯಾಮ್ ಬೋಟ್ ಹರೀಶ್, ಮಣಿಪಾಲ ಉದಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ರಮೇಶ್ ಎ. ಬಂಗೇರ, ಗ್ರೂಪ್ ಆಫ್ ಶಿವಸಾಗರ್ ಆಡಳಿತ ನಿರ್ದೇಶಕ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ಡೆ, ಉಡುಪಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಆದಿಉಡುಪಿ ಇದರ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ, ಮಣಿಪಾಲ ಬಬ್ಬುಸ್ವಾಮಿ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ, ಕಂಗಣಬೆಟ್ಟು ಶ್ರೀ ಭ.ತೀ.ಭಕ್ತ ವೃಂದ (ರಿ.),ಕಟ್ಟಡ ಸಮಿತಿ ಅಧ್ಯಕ್ಷ ವಿಶ್ವನಾಥ್ ಬೆಟ್ಟಡ,ತೋನ್ಸೆ ಬ್ರಹ್ಮ ಬೈದರ್ಕಳ ಪಂಚಧೂಮಾವತೀ ಗರೋಡಿಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಜತ್ತನ್, ಬಿಲ್ಲವ ಸಂಘ ಪಡುಬಿದ್ರಿ ಇದರ ಅಧ್ಯಕ್ಷ ವೈ. ಸುಧೀರ್ ಪಡುಬಿದ್ರಿ, ಬಿಲ್ಲವ ಸೇವಾ ಸಂಘ (ರಿ.) ಸಂತೆಕಟ್ಟೆ ಇದರ ಗೌರವಾಧ್ಯಕ್ಷ ಭಾಸ್ಕರ್ ಜತ್ತನ್, ಉದ್ಯಮಿ ಶ್ರೀ ಸೂರಜ್ ಪೂಜಾರಿ ಮಲ್ಪೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿರುವರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now