ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

0Shares

ಉಡುಪಿ, ಜನವರಿ 30 ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ ನಿಷ್ಠೆಯ ಬದುಕು ನಡೆಸಿದ ಕಾರಂತರ ಜೀವನಶೈಲಿ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು ಮತ್ತು ಡಾ.ಟಿ.ಎಂ.ಎ ಪೈ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್ ಹೇಳಿದರು.

ಅವರು ಇಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರಂತರ ಜೀವನ ತಿಳುವಳಿಕೆಯ ಯಾತ್ರೆ. ಸಮಾಜದಲ್ಲಿ ನಡೆದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರಲ್ಲಿ ಅವರು ಮೊದಲಿಗರು ಎಂದರು.

ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ ವಿದ್ಯಾರ್ಥಿಗಳಿಗೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆಯ ಜೀವನ ಶೈಲಿಯು ಪುಸ್ತಕಗಳ ಓದುವಿಕೆಯಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡಿದೆ. ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ಅವರ ಕಾದಂಬರಿಗಳ ಸ್ವರೂಪ ಹಾಗೂ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಮನದಟ್ಟು ಮಾಡಿ ಪುಸ್ತಕಗಳ ಓದಿನಲ್ಲಿ ಅವರ ಆಸಕ್ತಿಯನ್ನು ಹೆಚ್ಚಿಸುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದರು.

ಸಾಹಿತಿಗಳು ಮತ್ತು ಡಾ.ಟಿ.ಎಂ.ಎ ಪೈ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್ ಮತ್ತು ರುಕ್ಮಿಣಿ ಶೆಡ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಪಕ ಡಾ. ಪ್ರಸಾದ್ ರಾವ್ ಉಪನ್ಯಾಸ ನೀಡಿದರು.

ಸುಮಾರು 35 ಕ್ಕೂ ಹೆಚ್ಚು ಶಿಬಿರರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯರಾದ ಸತೀಶ್ ಕೊಡವೂರು, ಡಾ.ಭಾರತಿ ಮರವಂತೆ, ಕಾಲೇಜಿನ ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ಸ್ವಾಗತಿಸಿ, ಉಪನ್ಯಾಸಕಿ ಶಾಲಿನಿ ನಿರೂಪಿಸಿದರೆ, ಕಾರ್ಯಕ್ರಮದ ಸದಸ್ಯ ಸಂಚಾಲಕ ಜಿ. ಎಂ ಶರೀಫ್ ಹೂಡೆ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now