ಬ್ರಹ್ಮಾವರ : ಪಿಂಟೊ ಕೊಲೆ ಪ್ರಕರಣ – ಪ್ರಮುಖ ಆರೋಪಿಯ ಸಹೋದರನೂ ಬಂಧನ

ಬ್ರಹ್ಮಾವರ : ಪಿಂಟೊ ಕೊಲೆ ಪ್ರಕರಣ – ಪ್ರಮುಖ ಆರೋಪಿಯ ಸಹೋದರನೂ ಬಂಧನ
0Shares

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಇಂದು ರಾತ್ರಿ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ಸುಜಿತ್ ಪಿಂಟೊ ಮನೆಗೆ ಸಾಮಾನುಗಳನ್ನು ಪೂರೈಕೆ ಮಾಡುವ ರಿಕ್ಷಾ ಚಾಲಕ ಪ್ರಮೋದ್ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದು ಆತನನ್ನು ಬಂಧಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರೌಡಿಶೀಟ‌ರ್ ಸುಜಿತ್ ಪಿಂಟೊ ರಿಕ್ಷಾ ಚಾಲಕ ಪ್ರಮೋದ್ ಗೆ ಹಣ ನೀಡಲು ಬಾಕಿ ಇದ್ದು ಇದೇ ಕಾರಣಕ್ಕೆ ಪ್ರಮೋದ್ ಸುಜಿತ್ ಪಿಂಟೋನನ್ನು ತಾನು ಇರುವ ಸ್ಥಳಕ್ಕೆ ಬರುವಂತೆ ಕರೆದಿದ್ದನು. ಅದರಂತೆ ಸುಜಿತ್ ಪಿಂಟೊ ಅಲ್ಲಿಗೆ ಹೋಗಿದ್ದು ಇಬ್ಬರು ಮದ್ಯದ ಅಮಲಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡಿನಿಂದ ಸುಜಿತ್‌ ಪಿಂಟೊನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ರೌಡಿಶೀಟರ್ ಸುಜಿತ್ ಪಿಂಟೊ 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲಕ ಗುರುಪ್ರಸಾದ್‌ ಭಟ್ ಕೊಲೆ ಪ್ರಕರಣ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮಿನಗರದಲ್ಲಿ 2020ರಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದು, ಈತ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈತ ಮೊದಲು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಎಂಬಲ್ಲಿ ವಾಸವಾಗಿದ್ದು ಕೆಲ ವರ್ಷಗಳ ಹಿಂದೆ ಬ್ರಹ್ಮಾವರಕ್ಕೆ ಶಿಫ್ಟ್ ಆಗಿದ್ದನು. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now