
ಉಡುಪಿ : ಕಾರ್ಕಳ ತಾಲೂಕಿನ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ಮೇಘನಾ (13) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 6 ಗಂಟೆಗೆ ಬಾಲಕಿ ದಿಢೀರನೆ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ.
ತಕ್ಷಣ ಶಾಲಾ ಸಿಬ್ಬಂದಿ ಬಾಲಕಿಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now