ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಎಲ್‌ಐಸಿಯಿಂದ ಬ್ಯಾರಿಕೇಡ್‌ಗಳ ಹಸ್ತಾಂತರ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಎಲ್‌ಐಸಿಯಿಂದ ಬ್ಯಾರಿಕೇಡ್‌ಗಳ ಹಸ್ತಾಂತರ
0Shares

ಸಾರ್ವಜನಿಕ ಸುರಕ್ಷತೆ ಮತ್ತು ಸಾಮಾಜಿಕ ಜವಾಬ್ದಾರಿಯ ಆಶಯದೊಂದಿಗೆ ಭಾರತೀಯ ಜೀವ ವಿಮಾ ನಿಗಮದ (LIC) ಉಡುಪಿ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.

ಎಲ್‌ಐಸಿ ಉಡುಪಿ ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕರಾದ ಶ್ರೀ ಗಣಪತಿ ಭಟ್ ಅವರು ಬ್ಯಾರಿಕೇಡ್‌ಗಳನ್ನು ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, IPS ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಲ್‌ಐಸಿಯ ಮಾರುಕಟ್ಟೆ ಪ್ರಬಂಧಕರಾದ ಶ್ರೀ ಗುರುರಾಜ್ ರಾವ್ ಹಾಗೂ ವಿಕ್ರಯ ಪ್ರಬಂಧಕರಾದ ಶ್ರೀ ದುರ್ಗಾರಾಮ್ ಶೆಣೈ ಉಪಸ್ಥಿತರಿದ್ದರು.

ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವುದು, ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಪೊಲೀಸ್ ಇಲಾಖೆಯ ಕಾರ್ಯಗಳಿಗೆ ಸಹಕಾರ ನೀಡುವ ಉದ್ದೇಶದಿಂದ ಈ ಕೊಡುಗೆಯನ್ನು ನೀಡಲಾಗಿದೆ.

ಸಮಾಜದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಎಲ್‌ಐಸಿ ಕೈಗೊಂಡಿರುವ ಈ ಉಪಕ್ರಮವು ಸಂಸ್ಥೆಯ ಸಾಮಾಜಿಕ ಬದ್ಧತೆ ಮತ್ತು ಸಮಾಜಮುಖಿ ಕಾಳಜಿಗೆ ಸಾಕ್ಷಿಯಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now