
ಉಡುಪಿ : ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಆಯ್ಕೆ ಪ್ರತಿಕ್ರಿಯೆ ನಡೆದಿದ್ದು, ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆಯಂತೆ ಮತ್ತು ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ದೊರಕಿದ್ದು, ವಿವಿಧ ನಿಗಮಗಳಿಗೆ ನೇಮಕಾತಿ ಪೂರ್ಣಗೊಂಡಿದೆ. ಇದರಂತೆ ವಿಧಾನಪರಿಷತ್ ಸದಸ್ಯರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರನ್ನು ವಿಧಾನಪರಿಷತ್ ನ ಮುಖ್ಯ ಸಚೇತಕರನ್ನಾಗಿ ಆಯ್ಕೆ ಮಾಡಲಾಗಿದೆ.
ವಿದ್ಯಾರ್ಥಿ ಜೀವನದಿಂದಲೇ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಮಂಜುನಾಥ್ ಭಂಡಾರಿ, ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕರಲ್ಲಿ ಒಬ್ಬರು. ಹಲವು ಶಿಕ್ಷಣ ಸಂಸ್ಥೆಗಳ ನಡೆಸುತ್ತಿರುವ ಇವರು, ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ಗೆ ನಿಕಟ ಸಂಪರ್ಕ ಇರುವ ಇವರನ್ನು ಮುಖ್ಯ ಸಚೇತಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ, ಉಡುಪಿ ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾಗಿರುವ ವಿಶ್ವಾಸ್ ಅಮೀನ್ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now