ಉಡುಪಿ ಟ್ರಾಫಿಕ್ ಪೊಲೀಸ್ ನೇತೃತ್ವದಲ್ಲಿ ನಗರದ ವಿವಿಧ ಭಾಗದಲ್ಲಿ ವಿಶೇಷ ವಾಹನ ತಪಾಸಣೆ

ಉಡುಪಿ ಟ್ರಾಫಿಕ್ ಪೊಲೀಸ್ ನೇತೃತ್ವದಲ್ಲಿ ನಗರದ ವಿವಿಧ ಭಾಗದಲ್ಲಿ ವಿಶೇಷ ವಾಹನ ತಪಾಸಣೆ
0Shares

ಉಡುಪಿ : ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಯ ವತಿಯಿಂದ ಇಂದು ಬೆಳಿಗ್ಗೆ ನಗರದ ಪ್ರಮುಖ ಪ್ರದೇಶಗಳಾದ ಸಿಟಿ ಬಸ್ ಸ್ಟ್ಯಾಂಡ್, ಸರ್ವಿಸ್ ಬಸ್ ಸ್ಟ್ಯಾಂಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್, ಬೀಡಿನಗುಡ್ಡೆ ಜಂಕ್ಷನ್ ಹಾಗೂ ಶ್ರೀ ಕೃಷ್ಣಮಠದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ವಾಹನ ತಪಾಸಣೆ ಮತ್ತು ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲುಗಡೆ, ವಾಹನಗಳಲ್ಲಿ ಅಪಾಯಕಾರಿಯಾಗಿ ಜನರ ಸಾಗಾಟ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಯಿತು.
ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನಿಗದಿತ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲುಗಡೆ ಮಾಡುವಂತೆ ಹಾಗೂ ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಉಡುಪಿ ಟ್ರಾಫಿಕ್ ಪೊಲೀಸರು ಮನವಿ ಮಾಡಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now