ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಆಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಆಂತರಾಷ್ಟ್ರೀಯ ಮಹಿಳಾ ದಿನಾಚರಣೆ

0Shares

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಆಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಮಿತಿಯ ತಾಲೂಕು ಅಧ್ಯಕ್ಷರಾದ ಶ್ರೀ ನವೀನ್ಚಂದ್ರ ಸುವರ್ಣ ಅವರು ವಹಿಸಿಕೊಂಡು ಪ್ರಸ್ತಾವಿಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಿ ಪಂಚ ಗ್ಯಾರಂಟಿಗಳು ಹೇಗೆ ಬಡವರಿಗೆ ಅನುಕೂಲಕರವಾಗಿದೆ ಎಂಬುದನ್ನು ವಿವರಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅಂಗನವಾಡಿ ಕಾರ್ಯಕರ್ತೆಯರನ್ನು ಆಹ್ವಾನಿಸಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ವಿಜಯ ನಾರಾಯಣ, ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಾ, ಫಿಲೋಮಿನ, ಪೂರ್ಣಿಮಾ ಹಾಗೂ ತಾಲೂಕು ಪಂಚಾಯತ್ ಮಹಿಳಾ ಸಿಬ್ಬಂಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಿತಿಯ ಸದಸ್ಯ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಿತಿಯ ಸದಸ್ಯರಾದ ಸುಧೀರ್ ಕರ್ಕೇರ ಧನ್ಯವಾದ ಹೇಳಿದರು.
ಕಾರ್ಯ ಕ್ರಮದಲ್ಲಿ ಸಮಿತಿಯ ಸದಸ್ಯರಾದ ಕೀರ್ತಿಕುಮಾರ್, ರೀನಾ ವಿನುತಾ ಡಿಸೋಜ, ಸವಿತಾ ಕುಂದರ್, ರಾಜೇಶ್ ಮೂಲ್ಯ, ಪ್ರಭಾಕರ್, ಹಸನಬ್ಬ ಶೇಕ್, ಎಸ್. ವಿಜಯ್, ಲವ ಕರ್ಕೇರ, ಉದಯ್. ಸಿ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now