ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

0Shares

ಉಪ್ಪಿನಂಗಡಿ: ರಸ್ತೆ ಬದಿಯ ಚರಂಡಿ ಮೋರಿಗೆ ಡಿಕ್ಕಿಯಾದ ಕಾರೊಂದು ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಕ್ರಾಸ್ ಬಳಿ ಜ.30ರಂದು ನಡೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಅದರ ಬದಿಯಲ್ಲಿ ಹೊಸ ಹೆದ್ದಾರಿ ನಿರ್ಮಾಣದ ಕಾಮಗಾರಿ ನಡೆಯುತ್ತಿತ್ತು.

ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು (ಕೆಎ05 ಎನ್‌ನ್ 8222) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಸಾಗಿ ಹೊಸ ಹೆದ್ದಾರಿ ನಿರ್ಮಾಣದ ಸಂದರ್ಭ ಚರಂಡಿಗೆ ಅಳವಡಿಸಿದ್ದ ಮೋರಿಗೆ ಢಿಕ್ಕಿಯಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now