ಉಪ್ಪೂರಿನಲ್ಲಿ ಪ್ರಜಾಸೇವಾ ಆಂದೋಲನ: 41 ಸಾರ್ವಜನಿಕ ಅಹವಾಲು ಸ್ವೀಕಾರ, ಫಲಾನುಭವಿಗಳಿಗೆ ಚೆಕ್ ವಿತರಣೆ

ಉಪ್ಪೂರಿನಲ್ಲಿ ಪ್ರಜಾಸೇವಾ ಆಂದೋಲನ: 41 ಸಾರ್ವಜನಿಕ ಅಹವಾಲು ಸ್ವೀಕಾರ, ಫಲಾನುಭವಿಗಳಿಗೆ ಚೆಕ್ ವಿತರಣೆ
0Shares

ದಿನಾಂಕ : 17-10-2026 ರಂದು ಮಹಾತ್ಮ ಗಾಂಧಿ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಯಶ್ ಪಾಲ್ ಎ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ , ಮಾನ್ಯ ಅಪರ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ, ಮಾನ್ಯ ಉಪಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಉಡುಪಿ, ಮಾನ್ಯ ಉಪವಿಭಾಗಧಿಕಾರಿ ಕುಂದಾಪುರ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು,

ಮತ್ತು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಉಪಸ್ಥಿತರಿದ್ದರು. ಮಾನ್ಯ ತಹಶಿಲ್ದಾರರು ಬ್ರಹ್ಮಾವರ, ಮಾನ್ಯ ಕಾರ್ಯನಿರ್ವಹಣಾಧಿಕಾರಿತಾಲೂಕು ಪಂಚಾಯತ್ ಬ್ರಹ್ಮಾವರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ 41 ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ಅಲ್ಲದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇ25 ಮತ್ತು ಶೇ5 ರಡಿಯಲ್ಲಿ ಸಹಾಯಧನ ಕೋರಿ ಅರ್ಜಿನೀಡದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು, ತಾ.ಪಂ ಸಹಾಯಕ ನಿರ್ದೇಶಕರು ಕಾರ್ಯಕ್ರಮ ನಿರೂಪಿಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now