
ಕುಂದಾಪುರ : ಅಕ್ಟೋಬರ್ 6 ರಂದು ಕರಾವಳಿ ಸ್ಪೋಟ್ಸ್ ಕ್ಲಬ್ ಮರವಂತೆ – ನಾವುಂದ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವುಂದದಲ್ಲಿ ನಡೆದ ಅಂತರ್ ಜಿಲ್ಲೆಗಳ 8 ಬಲಿಷ್ಠ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now