ಕರ್ನಾಟಕಕ್ಕೆ ಮೊದಲ ಸ್ಥಾನ.. ತಂದೆ, ತಾಯಿಗೆ ಘನತೆ ತಂದ ನಿಖಿಲ್‌ ಸೊನ್ನದ

ಕರ್ನಾಟಕಕ್ಕೆ ಮೊದಲ ಸ್ಥಾನ.. ತಂದೆ, ತಾಯಿಗೆ ಘನತೆ ತಂದ ನಿಖಿಲ್‌ ಸೊನ್ನದ

0Shares

ವಿಜಯಪುರ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್​-ಯುಜಿ) 2025ರ ಫಲಿತಾಂಶ ಪ್ರಕಟ ಮಾಡಿದೆ. ಒಟ್ಟು 12.36 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್​ಗೆ ಪ್ರವೇಶ ಪಡೆದಿದ್ದಾರೆ. ಇದರಲ್ಲಿ ರಾಜಸ್ಥಾನದ ಮಹೇಶ್ ಕುಮಾರ್ ಇಡೀ ದೇಶಕ್ಕೆ ಪ್ರಥಮ ಶ್ರೇಣಿ ಪಡೆದರೆ, ಕರ್ನಾಟಕಕ್ಕೆ ನಿಖಿಲ್‌ ಸೊನ್ನದ ಮೊದಲ ಸ್ಥಾನ ಪಡೆದಿದ್ದಾರೆ.

ವಿಜಯಪುರ ನಗರದ ನಿಖಿಲ್‌ ಸೊನ್ನದ ಇಡೀ ದೇಶಕ್ಕೆ 17ನೇ ಶ್ರೇಣಿಯಲ್ಲಿ ಪಾಸ್ ಆಗಿದ್ರೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ ನಿಖಿಲ್‌ ಸೊನ್ನದ​ ಅವರು 720 ಅಂಕಗಳಿಗೆ 670 ಅಂಕ ಗಳಿಸಿ ಈ ಸಾಧನೆ ಮಾಡಿದ್ದಾರೆ. ವಿಜಯಪುರ ನಗರದ ಸಂಜೀವಿನಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ದಂಪತಿ ಡಾ.ಸಿದ್ದಪ್ಪ ಸೊನ್ನದ ಹಾಗೂ ಡಾ.ಮೀನಾಕ್ಷಿ ಸೊನ್ನದ ಅವರ ಮಗನೇ ಈ ನಿಖಿಲ್ ಆಗಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now