ವಿಜಯಪುರದ  ಅತಿ ಕಿರಿಯ ವಯಸ್ಸಿನ ಪೈಲಟ್

ವಿಜಯಪುರದ ಅತಿ ಕಿರಿಯ ವಯಸ್ಸಿನ ಪೈಲಟ್

0Shares

ವಿಜಯಪುರದ 18 ವರ್ಷದ ಸಮೀರಾ ಹುಲ್ಲೂರ್ ಅವರು ಭಾರತದ ಅತ್ಯಂತ ಕಿರಿಯ ಕಮರ್ಷಿಯಲ್​ ಪೈಲಟ್ ಆಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿನೋದ್ ಯಾದವ್ ಏವಿಯೇಷನ್ ಅಕಾಡೆಮಿ ಮತ್ತು ಕಾರ್ವರ್ ಏವಿಯೇಷನ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಅವರು ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಅವರ ಸಾಧನೆಯು ಅನೇಕ ಯುವಕರಿಗೆ ಸ್ಫೂರ್ತಿಯಾಗಿದೆ ಮತ್ತು ರಾಜ್ಯಕ್ಕೆ ಹೆಮ್ಮೆಯನ್ನು ತಂದಿದೆ.

ವಿಜಯಪುರ ನಗರದ ಓರ್ವ ಯುವತಿ ಅತ್ಯಂತ ಚಿಕ್ಕ ವಯಸ್ಸಿನಲ್ಲೆ ಪೈಲಟ್​​ ಆಗಿದ್ದಾರೆ. ಈ ಮೂಲಕ ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ 18 ವರ್ಷದ ಸಮೀರಾ ಹುಲ್ಲೂರ್ ಇದೀಗ ಕಮರ್ಷಿಯಲ್​ ಪೈಲಟ್ ಲೈಸೆನ್ಸ್ (ಸಿಪಿಎಲ್) ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಕಮರ್ಷಿಯಲ್​ ಪೈಲಟ್ ಲೈಸೆನ್ಸ್ ಪಡೆದ ಭಾರತದ ಅತ್ಯಂತ ಕಿರಿಯ ಪೈಲಟ್​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಸಮೀರಾ ಅವರು ಆರು ತಿಂಗಳ ಕಾಲ ವಾಯುಯಾನ ತರಬೇತಿಯನ್ನು ವಿನೋದ್ ಯಾದವ್ ಏವಿಯೇಷನ್ ​​ಅಕಾಡೆಮಿಯಲ್ಲಿ ಪಡೆದರು. ಅಕಾಡೆಮಿ ಸಂಸ್ಥಾಪಕರಾದ ವಿನೋದ್ ಯಾದವ್ ಮತ್ತು ಕ್ಯಾಪ್ಟನ್ ತಪೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮೊದಲ ಪ್ರಯತ್ನದಲ್ಲೇ ಎಲ್ಲ ಸಿಪಿಎಲ್​ ಪರೀಕ್ಷೆಗಳಲ್ಲಿ ಉತ್ತೀರ್ಣರಾದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now