
ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಗಣೇಶ್ ಪ್ರಾಯ 32 ವರ್ಷ ತಂದೆ: ವೆಂಕಟರಮಣ ವಾಸ: ನೇತಾಜಿನಗರ 04 ನೇ ಅಡ್ಡರಸ್ತೆ, 80 ಬಡಗಬೆಟ್ಟು ಗ್ರಾಮ, ಉಡುಪಿ ತಾಲೂಕು, ಉಡುಪಿ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆರವರ ವರದಿಯ ಮೇರೆಗೆ ಮಾನ್ಯ ಜಿಲ್ಲಾ ದಂಡಾಧಿಕಾರಿಯವರು ಹಾಗೂ ಜಿಲ್ಲಾಧಿಕಾರಿಯವರು, ಉಡುಪಿ ಜಿಲ್ಲೆ, ಉಡುಪಿರವರು ದಿನಾಂಕ: 01-06-2026 ರಂದು ಆದೇಶ ಹೊರಡಿಸಿರುತ್ತಾರೆ.
ಗೂಂಡಾ ಆಸಾಮಿಯ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಕಳ್ಳತನ ಸಹಿತ ಒಟ್ಟು 01 ಪ್ರಕರಣಗಳು ದಾಖಲಾಗಿರುತ್ತದೆ. ಅವುಗಳ ಪೈಕಿ 03 ಪ್ರಕರಣಗಳು ಖುಲಾಸೆ, 04 ಪ್ರಕರಣ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 2 ಪ್ರಕರಣಗಳು ತನಿಖೆಯಲ್ಲಿರುತ್ತದೆ.
ಬಂಧಿತ ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now